ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 10:17
ಬೈಬಲ್ ವಚನ · IRV
ರೋಮಾಪುರದವರಿಗೆ 10:17
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 10
ಸಂದರ್ಭದಲ್ಲಿ
14ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
15ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
16ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
18ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
19ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
ಇಂಗ್ಲಿಷ್ನಲ್ಲಿ
Consequently, faith comes by hearing, and hearing by the word of Christ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು