Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 10:9

ಬೈಬಲ್ ವಚನ · IRV

ರೋಮಾಪುರದವರಿಗೆ 10:9

ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 10

ಸಂದರ್ಭದಲ್ಲಿ

6ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’

7ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.

8“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

9ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

10ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.

11“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.

12ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

ರೋಮಾಪುರದವರಿಗೆ 10

ಇಂಗ್ಲಿಷ್‌ನಲ್ಲಿ

Berean Standard BibleRomans 10:9that if you confess with your mouth, “Jesus is Lord,” and believe in your heart that God raised Him from the dead, you will be saved.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಲೂಕ 12:8“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
ಅ. ಕೃ 16:31ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
ಫಿಲಿಪ್ಪಿ 2:11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಮತ್ತಾ 10:32–33“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
1 ಯೋಹಾ 4:2–3ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
1 ಪೇತ್ರ 1:21ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
ರೋಮಾ 8:34ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
1 ಕೊರಿ 15:14–18ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು