Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 12:19

ಬೈಬಲ್ ವಚನ · IRV

ರೋಮಾಪುರದವರಿಗೆ 12:19

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 12

ಸಂದರ್ಭದಲ್ಲಿ

16ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

17ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.

18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

20ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

ರೋಮಾಪುರದವರಿಗೆ 12

ಇಂಗ್ಲಿಷ್‌ನಲ್ಲಿ

Berean Standard BibleRomans 12:19Do not avenge yourselves, beloved, but leave room for God’s wrath. For it is written: “Vengeance is Mine; I will repay, says the Lord.”

ಹಳೆಯ ಒಡಂಬಡಿಕೆಯಿಂದ ಉಲ್ಲೇಖ

ಧರ್ಮೋ 32:35ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಇಬ್ರಿ 10:30“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
ಜ್ಞಾನೋ 24:29“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
ಜ್ಞಾನೋ 20:22ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
1 ಥೆಸ 4:6ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.
ರೋಮಾ 12:14ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
ಯಾಜ 19:18“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು