ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 12:2
ಬೈಬಲ್ ವಚನ · IRV
ರೋಮಾಪುರದವರಿಗೆ 12:2
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 12
ಸಂದರ್ಭದಲ್ಲಿ
1ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
4ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
ಇಂಗ್ಲಿಷ್ನಲ್ಲಿ
Do not be conformed to this world, but be transformed by the renewing of your mind. Then you will be able to test and approve what is the good, pleasing, and perfect will of God.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು