Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 13:8

ಬೈಬಲ್ ವಚನ · IRV

ರೋಮಾಪುರದವರಿಗೆ 13:8

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 13

ಸಂದರ್ಭದಲ್ಲಿ

5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.

6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

7ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.

8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.

9ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.

10ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.

11ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.

ರೋಮಾಪುರದವರಿಗೆ 13

ಇಂಗ್ಲಿಷ್‌ನಲ್ಲಿ

Berean Standard BibleRomans 13:8Be indebted to no one, except to one another in love. For he who loves his neighbor has fulfilled the law.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮತ್ತಾ 22:39–40ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
ಗಲಾ 5:14“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
ಮತ್ತಾ 7:12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ಜ್ಞಾನೋ 3:27–28ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
ಯೋಹಾ 13:34ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
ಯಾಕೋ 2:8ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು