Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 15:13

ಬೈಬಲ್ ವಚನ · IRV

ರೋಮಾಪುರದವರಿಗೆ 15:13

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 15

ಸಂದರ್ಭದಲ್ಲಿ

10ಇನ್ನೊಮ್ಮೆ, “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ,

11ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.

12ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”

13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

14ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

15ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.

ರೋಮಾಪುರದವರಿಗೆ 15

ಇಂಗ್ಲಿಷ್‌ನಲ್ಲಿ

Berean Standard BibleRomans 15:13Now may the God of hope fill you with all joy and peace as you believe in Him, so that you may overflow with hope by the power of the Holy Spirit.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

2 ಥೆಸ 2:16–17ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
ರೋಮಾ 12:12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
2 ಕೊರಿ 9:8ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
ಗಲಾ 5:22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ರೋಮಾ 14:17ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಯೋಹಾ 14:1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ರೋಮಾ 15:5ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು