Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 16:17

ಬೈಬಲ್ ವಚನ · IRV

ರೋಮಾಪುರದವರಿಗೆ 16:17

ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 16

ಸಂದರ್ಭದಲ್ಲಿ

14ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.

15ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.

16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.

17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

18ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

ರೋಮಾಪುರದವರಿಗೆ 16

ಇಂಗ್ಲಿಷ್‌ನಲ್ಲಿ

Berean Standard BibleRomans 16:17Now I urge you, brothers, to watch out for those who create divisions and obstacles that are contrary to the teaching you have learned. Turn away from them.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೂದ 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.
2 ಥೆಸ 3:6ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
1 ತಿಮೊ 6:3–5ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
2 ತಿಮೊ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
ಕೊಲೊ 2:8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
ತೀತ 3:10ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
2 ಯೋಹಾ 1:7–11ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
2 ಥೆಸ 3:14–15ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು