Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 3:23

ಬೈಬಲ್ ವಚನ · IRV

ರೋಮಾಪುರದವರಿಗೆ 3:23

ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.

ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 3

ಸಂದರ್ಭದಲ್ಲಿ

20ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.

21ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

22ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

23ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.

24ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

25ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

26ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.

ರೋಮಾಪುರದವರಿಗೆ 3

ಇಂಗ್ಲಿಷ್‌ನಲ್ಲಿ

Berean Standard BibleRomans 3:23for all have sinned and fall short of the glory of God,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಪ್ರಸ 7:20ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
1 ಯೋಹಾ 1:8–10ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
ರೋಮಾ 3:9ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
ಗಲಾ 3:22ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
ರೋಮಾ 11:32ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.
ರೋಮಾ 3:19ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
1 ಥೆಸ 2:12ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
2 ಥೆಸ 2:14ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು