ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 5:3–5
ಬೈಬಲ್ ವಚನ · IRV
ರೋಮಾಪುರದವರಿಗೆ 5:3–5
3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
4ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 5
ಸಂದರ್ಭದಲ್ಲಿ
1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
2ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
4ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
6ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಇಂಗ್ಲಿಷ್ನಲ್ಲಿ
Not only that, but we also rejoice in our sufferings, because we know that suffering produces perseverance; perseverance, character; and character, hope. And hope does not disappoint us, because God has poured out His love into our hearts through the Holy Spirit, whom He has given us.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು