ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 5:8
ಬೈಬಲ್ ವಚನ · IRV
ರೋಮಾಪುರದವರಿಗೆ 5:8
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 5
ಸಂದರ್ಭದಲ್ಲಿ
5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
6ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
9ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
10ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
11ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
ಇಂಗ್ಲಿಷ್ನಲ್ಲಿ
But God proves His love for us in this: While we were still sinners, Christ died for us.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು