ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 6:23
ಬೈಬಲ್ ವಚನ · IRV
ರೋಮಾಪುರದವರಿಗೆ 6:23
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 6
ಸಂದರ್ಭದಲ್ಲಿ
20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
23ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಇಂಗ್ಲಿಷ್ನಲ್ಲಿ
For the wages of sin is death, but the gift of God is eternal life in Christ Jesus our Lord.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು