ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ರೋಮಾಪುರದವರಿಗೆ 8:28
ಬೈಬಲ್ ವಚನ · IRV
ರೋಮಾಪುರದವರಿಗೆ 8:28
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಇಡೀ ಅಧ್ಯಾಯ ಓದಿ: ರೋಮಾಪುರದವರಿಗೆ 8
ಸಂದರ್ಭದಲ್ಲಿ
25ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
26ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
27ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
30ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಇಂಗ್ಲಿಷ್ನಲ್ಲಿ
And we know that God works all things together for the good of those who love Him, who are called according to His purpose.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು