ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ತೀತನಿಗೆ 3:2
ಬೈಬಲ್ ವಚನ · IRV
ತೀತನಿಗೆ 3:2
ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
ಸಂದರ್ಭದಲ್ಲಿ
1ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
2ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
3ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
5ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ಇಂಗ್ಲಿಷ್ನಲ್ಲಿ
to malign no one, and to be peaceable and gentle, showing full consideration to everyone.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು