Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಚಟ

ಕಷ್ಟದ ಸಮಯಗಳು

ಚಟ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ತುಂಬಾ ಕಷ್ಟವಾಗಿದ್ದರೆ, ಒಬ್ಬರೇ ಅದನ್ನು ಹೊರಬೇಡಿ: ನೀವು ನಂಬುವ ಯಾರೊಂದಿಗಾದರೂ, ಯಾಜಕರು ಅಥವಾ ಸಭಾಪಾಲಕರೊಂದಿಗೆ, ಅಥವಾ ವೈದ್ಯರೊಂದಿಗೆ ಮಾತನಾಡಿ.

1 ಕೊರಿ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
1 ಕೊರಿ 6:19–20ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
1 ಪೇತ್ರ 5:8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಗಲಾ 5:19–21ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
1 ಕೊರಿ 6:12“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
1 ಕೊರಿ 15:33ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
ಜ್ಞಾನೋ 20:1ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
ಮತ್ತಾ 6:13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
ಯಾಕೋ 4:7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಎಫೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
ಯೋಹಾ 8:36ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ರೋಮಾ 13:14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ತೀತ 2:11–12ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ಯೋಹಾ 8:34ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
ಯೆಶಾ 5:11ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು