ಮುಖಪುಟ › ಬೈಬಲ್ ಏನು ಹೇಳುತ್ತದೆ › ವಯಸ್ಸಾದ ತಂದೆತಾಯಿಗಳ ಆರೈಕೆ
ಸಂಬಂಧಗಳು
ವಯಸ್ಸಾದ ತಂದೆತಾಯಿಗಳ ಆರೈಕೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ತಿಮೊ 5:8
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.ವಿಮೋ 20:12
“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.ಜ್ಞಾನೋ 23:22
ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.ಯಾಜ 19:32
“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.ಧರ್ಮೋ 5:16
“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.1 ತಿಮೊ 5:1
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,ಎಫೆ 6:2
ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,ಯೋಹಾ 19:25–27
ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.ಯೆಶಾ 46:3–4
ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ. ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.ಕೀರ್ತ 71:9
ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.ಯಾಕೋ 1:27
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.ಮತ್ತಾ 15:4–6
ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ. ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ, ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.ಜ್ಞಾನೋ 23:25
ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.ಯೋಬ 12:12
ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು