Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಕೋಪ

ಭಾವನೆಗಳು

ಕೋಪ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯಾಕೋ 1:19–20ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಎಫೆ 4:26–27“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
ಜ್ಞಾನೋ 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಜ್ಞಾನೋ 14:29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಎಫೆ 4:31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
ಜ್ಞಾನೋ 19:11ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
ಜ್ಞಾನೋ 29:11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
ಜ್ಞಾನೋ 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಕೀರ್ತ 37:8ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
ಪ್ರಸ 7:9ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
ಜ್ಞಾನೋ 15:18ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಕೊಲೊ 3:8ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
ಎಫೆ 4:32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಮತ್ತಾ 5:22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.
ಜ್ಞಾನೋ 14:17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು