Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಆತಂಕ ಮತ್ತು ಚಿಂತೆ

ಭಾವನೆಗಳು

ಆತಂಕ ಮತ್ತು ಚಿಂತೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಫಿಲಿಪ್ಪಿ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
1 ಪೇತ್ರ 5:7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಮತ್ತಾ 6:34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
ಜ್ಞಾನೋ 12:25ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
2 ತಿಮೊ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಕೀರ್ತ 56:3ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ಕೀರ್ತ 55:22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ಕೀರ್ತ 94:19ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಮತ್ತಾ 11:28–30“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಫಿಲಿಪ್ಪಿ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಕೀರ್ತ 34:4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಯೆಶಾ 35:4ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು