ಮುಖಪುಟ › ಬೈಬಲ್ ಏನು ಹೇಳುತ್ತದೆ › ದ್ರೋಹ ಮತ್ತು ನೋವು
ಸಂಬಂಧಗಳು
ದ್ರೋಹ ಮತ್ತು ನೋವು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಮೀಕ 7:5–6
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ. ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.ಮಾರ್ಕ 11:25
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಕೀರ್ತ 118:8
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.ಮತ್ತಾ 6:14–15
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ಕೀರ್ತ 34:18
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.ಲೂಕ 6:27
“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;ಕೀರ್ತ 41:9
ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.ಲೂಕ 21:16
ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.ಲೂಕ 22:48
ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.ರೋಮಾ 12:19
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು