ಮುಖಪುಟ › ಬೈಬಲ್ ಏನು ಹೇಳುತ್ತದೆ › ಮುರಿದ ಹೃದಯ
ಕಷ್ಟದ ಸಮಯಗಳು
ಮುರಿದ ಹೃದಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 13 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಕೀರ್ತ 147:3
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.ಕೀರ್ತ 34:18
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.ಪ್ರಕ 21:4
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.ಯೋಹಾ 14:27
“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.ಕೀರ್ತ 73:26
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.1 ಪೇತ್ರ 5:10
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.ಕೀರ್ತ 55:22
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.2 ಕೊರಿ 4:9
ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.ನಹೂ 1:7
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.ಕೀರ್ತ 51:17
ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.ಯೆಶಾ 61:1
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,ಕೀರ್ತ 39:12
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.ಜ್ಞಾನೋ 12:25
ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು