Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಮಕ್ಕಳು

ಸಂಬಂಧಗಳು

ಮಕ್ಕಳು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಕೀರ್ತ 127:3–5ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
ಜ್ಞಾನೋ 22:6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಜ್ಞಾನೋ 17:6ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಮತ್ತಾ 19:14ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
ಎಫೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಮತ್ತಾ 18:10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
ಯೆಶಾ 54:13ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
3 ಯೋಹಾ 1:4ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
ಯೋಹಾ 16:21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
ಮತ್ತಾ 18:1–3ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದಿ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
ಕೀರ್ತ 113:9ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಕೊಲೊ 3:21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ಜ್ಞಾನೋ 13:24ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು