Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಆದರಣೆ

ಕಷ್ಟದ ಸಮಯಗಳು

ಆದರಣೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

2 ಕೊರಿ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ರೋಮಾ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
ಯೆಶಾ 40:1“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ಕೀರ್ತ 34:17–18ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಕೀರ್ತ 23:4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಮತ್ತಾ 11:28–30“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಕೀರ್ತ 119:76ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
ಮತ್ತಾ 5:4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
ಕೀರ್ತ 119:50ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು