ಮುಖಪುಟ › ಬೈಬಲ್ ಏನು ಹೇಳುತ್ತದೆ › ಜಗಳ ಮತ್ತು ಸಮಾಧಾನ ಮಾಡುವುದು
ಸಂಬಂಧಗಳು
ಜಗಳ ಮತ್ತು ಸಮಾಧಾನ ಮಾಡುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಮತ್ತಾ 5:9
ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.ಜ್ಞಾನೋ 15:1
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.ಕೀರ್ತ 34:14
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.ಯಾಕೋ 4:1–2
ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.ಮತ್ತಾ 18:15–17
“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.ಎಫೆ 4:26
“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.ರೋಮಾ 14:19
ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.2 ತಿಮೊ 2:23–24
ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂರೋಮಾ 12:18
ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.ಯಾಕೋ 1:19
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು