ಮುಖಪುಟ › ಬೈಬಲ್ ಏನು ಹೇಳುತ್ತದೆ › ತೃಪ್ತಿ
ಭಾವನೆಗಳು
ತೃಪ್ತಿ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಫಿಲಿಪ್ಪಿ 4:11–13
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.1 ತಿಮೊ 6:6–8
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.ಇಬ್ರಿ 13:5
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.ಮತ್ತಾ 6:31–33
ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.ಲೂಕ 12:15
ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.2 ಕೊರಿ 12:10
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.ಫಿಲಿಪ್ಪಿ 4:19
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.ಮತ್ತಾ 6:25
“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.ಜ್ಞಾನೋ 16:8
ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.ಪ್ರಸ 5:12
ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು