Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಧೈರ್ಯ

ಕಷ್ಟದ ಸಮಯಗಳು

ಧೈರ್ಯ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಧರ್ಮೋ 31:6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಕೀರ್ತ 112:7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
2 ತಿಮೊ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಜ್ಞಾನೋ 28:1ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
ಕೀರ್ತ 31:24ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.
1 ಕೊರಿ 16:13ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ಕೀರ್ತ 27:14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಯೆಹೋ 1:6ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು