Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಮರಣ ಮತ್ತು ಸಾಯುವಿಕೆ

ಕಷ್ಟದ ಸಮಯಗಳು

ಮರಣ ಮತ್ತು ಸಾಯುವಿಕೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಪ್ರಸ 12:7ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಪ್ರಕ 21:4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
ಯೋಹಾ 14:1–3“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
ಯೋಹಾ 11:25ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
ರೋಮಾ 14:8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.
ಲೂಕ 23:43ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
ಕೀರ್ತ 116:15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
ಕೀರ್ತ 23:4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
2 ಕೊರಿ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
1 ಥೆಸ 4:14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು