ಮುಖಪುಟ › ಬೈಬಲ್ ಏನು ಹೇಳುತ್ತದೆ › ಸಾಲ ಮತ್ತು ಸಾಲ ಕೊಡುವುದು
ಜೀವನ ಮತ್ತು ಕೆಲಸ
ಸಾಲ ಮತ್ತು ಸಾಲ ಕೊಡುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 22:7
ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.ರೋಮಾ 13:8
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.ಧರ್ಮೋ 23:19–20
ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.ಕೀರ್ತ 37:21
ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.ವಿಮೋ 22:25
ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.ಜ್ಞಾನೋ 22:26–27
ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ, ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?ಲೂಕ 14:28
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?ಮತ್ತಾ 5:42
ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.ರೋಮಾ 13:7
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.ಜ್ಞಾನೋ 19:17
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.ಕೀರ್ತ 15:5
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.ಇಬ್ರಿ 13:5
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.ಧರ್ಮೋ 15:7
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.ಯಾಜ 25:35–37
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು. ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.ಧರ್ಮೋ 28:12
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು