Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ನಿರ್ಧಾರಗಳನ್ನು ತೆಗೆದುಕೊಳ್ಳುವುದು

ಜೀವನ ಮತ್ತು ಕೆಲಸ

ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಯಾಕೋ 1:5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಜ್ಞಾನೋ 11:14ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
ಫಿಲಿಪ್ಪಿ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ಜ್ಞಾನೋ 12:15ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
ಜ್ಞಾನೋ 15:22ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
ಯೆಶಾ 30:21ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
ಕೀರ್ತ 32:8ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
ಜ್ಞಾನೋ 18:15ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
ಜ್ಞಾನೋ 16:9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ರೋಮಾ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಜ್ಞಾನೋ 2:6ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
1 ಅರಸು 3:9ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.
ಜ್ಞಾನೋ 16:3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
ಜ್ಞಾನೋ 1:5ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು