Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ನಿರುತ್ಸಾಹ

ಭಾವನೆಗಳು

ನಿರುತ್ಸಾಹ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
2 ಕೊರಿ 4:8–9ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.
ಯೆರೆ 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ರೋಮಾ 12:12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
2 ಕೊರಿ 12:9ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ರೋಮಾ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಫಿಲಿಪ್ಪಿ 4:4–6ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಕೀರ್ತ 147:3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
ರೋಮಾ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
1 ಕೊರಿ 15:58ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ಕೀರ್ತ 31:24ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.
ಲೂಕ 18:1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
ಫಿಲಿಪ್ಪಿ 4:12–13ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು