ಮುಖಪುಟ › ಬೈಬಲ್ ಏನು ಹೇಳುತ್ತದೆ › ಸಂದೇಹ
ನಂಬಿಕೆ
ಸಂದೇಹ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯಾಕೋ 1:6
ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.ಮಾರ್ಕ 9:24
ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.ಮತ್ತಾ 14:31
ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.ಯೂದ 1:22
ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,ಇಬ್ರಿ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.ಮತ್ತಾ 21:21
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.ಮತ್ತಾ 17:20
ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,ಇಬ್ರಿ 11:1
ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.ಮಾರ್ಕ 4:40
ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲುಲೂಕ 12:28
ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.ಮಾರ್ಕ 11:23
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.ಕೀರ್ತ 42:5
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.ಮತ್ತಾ 28:17
ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.ಮತ್ತಾ 8:26
ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು