ಮುಖಪುಟ › ಬೈಬಲ್ ಏನು ಹೇಳುತ್ತದೆ › ಇತರರನ್ನು ಉತ್ತೇಜಿಸುವುದು
ಸಂಬಂಧಗಳು
ಇತರರನ್ನು ಉತ್ತೇಜಿಸುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ಥೆಸ 5:11
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.ಇಬ್ರಿ 10:24–25
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.ಎಫೆ 4:29
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.ಜ್ಞಾನೋ 12:25
ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.ಇಬ್ರಿ 3:13
ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.ಗಲಾ 6:2
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.1 ಥೆಸ 5:14
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.ಕೊಲೊ 3:16
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.ಜ್ಞಾನೋ 27:17
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.1 ಥೆಸ 4:18
ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು