ಮುಖಪುಟ › ಬೈಬಲ್ ಏನು ಹೇಳುತ್ತದೆ › ನಿಮ್ಮ ವೈರಿಗಳನ್ನು ಪ್ರೀತಿಸುವುದು
ಸಂಬಂಧಗಳು
ನಿಮ್ಮ ವೈರಿಗಳನ್ನು ಪ್ರೀತಿಸುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಲೂಕ 6:27–28
“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.ಮತ್ತಾ 5:44
ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.ರೋಮಾ 12:20
ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.ಜ್ಞಾನೋ 24:17
ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.ರೋಮಾ 12:14
ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.ಮತ್ತಾ 5:38–39
“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ. ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.ಲೂಕ 23:34
ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.ಜ್ಞಾನೋ 16:7
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.ರೋಮಾ 12:19
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.ಲೂಕ 6:35
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.ಮಾರ್ಕ 11:25
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಮತ್ತಾ 6:14–15
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು