ಮುಖಪುಟ › ಬೈಬಲ್ ಏನು ಹೇಳುತ್ತದೆ › ಸೋಲು
ಕಷ್ಟದ ಸಮಯಗಳು
ಸೋಲು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
2 ಕೊರಿ 12:9–10
ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.ರೋಮಾ 3:23
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.ಜ್ಞಾನೋ 24:16
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.ಕೀರ್ತ 73:26
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.ಫಿಲಿಪ್ಪಿ 4:13
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.ಯಾಕೋ 3:2
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.1 ಯೋಹಾ 1:8–9
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.ಮೀಕ 7:8
ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.ಜ್ಞಾನೋ 28:13
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.ಲೂಕ 22:31–32
“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು. ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.ಕೀರ್ತ 145:14
ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.ಫಿಲಿಪ್ಪಿ 3:13–14
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು