Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ನಂಬಿಕೆ

ನಂಬಿಕೆ

ನಂಬಿಕೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಲೂಕ 18:27ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
ರೋಮಾ 10:17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಇಬ್ರಿ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಮತ್ತಾ 21:22ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
ಇಬ್ರಿ 11:1ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
ಮತ್ತಾ 21:21ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
ಮಾರ್ಕ 11:22–24ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
2 ಕೊರಿ 5:7ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.
ಜ್ಞಾನೋ 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಲೂಕ 1:37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು