ಮುಖಪುಟ › ಬೈಬಲ್ ಏನು ಹೇಳುತ್ತದೆ › ಕುಟುಂಬ
ಸಂಬಂಧಗಳು
ಕುಟುಂಬ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 13 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ತಿಮೊ 5:8
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.ವಿಮೋ 20:12
“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.ಜ್ಞಾನೋ 22:6
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.ಯೆಹೋ 24:15
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.ಆದಿ 2:24
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.ಕೀರ್ತ 127:3–5
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.ಕೊಲೊ 3:20
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.ಜ್ಞಾನೋ 31:15–17
ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು. ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು. ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.2 ಕೊರಿ 12:14
ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.ಜ್ಞಾನೋ 13:22
ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.1 ಯೋಹಾ 3:17–18
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.ಆದಿ 18:19
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.ಮತ್ತಾ 15:4–6
ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ. ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ, ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು