ಮುಖಪುಟ › ಬೈಬಲ್ ಏನು ಹೇಳುತ್ತದೆ › ಭಯ
ಭಾವನೆಗಳು
ಭಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
2 ತಿಮೊ 1:7
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.ಯೆಹೋ 1:9
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.1 ಯೋಹಾ 4:18
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.ಯೆಶಾ 41:10
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.ಕೀರ್ತ 23:4
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.ಇಬ್ರಿ 13:6
ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.ಕೀರ್ತ 34:4
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.ಕೀರ್ತ 27:1
ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?ಯೋಹಾ 14:27
“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.ರೋಮಾ 8:15
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.ಧರ್ಮೋ 31:8
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.ಮತ್ತಾ 8:24–26
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.ಜ್ಞಾನೋ 29:25
ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.ಕೀರ್ತ 56:3–4
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು