ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರ ಕ್ಷಮೆ
ನಂಬಿಕೆ
ದೇವರ ಕ್ಷಮೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ಯೋಹಾ 1:9
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.ಎಫೆ 1:7
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.ಅ. ಕೃ 3:19
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ2 ಪೂರ್ವ 7:14
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.ಇಬ್ರಿ 10:17
“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.ಯೆಶಾ 1:18
“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.ಯೆಶಾ 55:7
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.ಅ. ಕೃ 10:43
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.ಮತ್ತಾ 6:12
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.ಯೆಶಾ 43:25
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು