ಮುಖಪುಟ › ಬೈಬಲ್ ಏನು ಹೇಳುತ್ತದೆ › ಇತರರನ್ನು ಕ್ಷಮಿಸುವುದು
ಸಂಬಂಧಗಳು
ಇತರರನ್ನು ಕ್ಷಮಿಸುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಮತ್ತಾ 6:14–15
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ಎಫೆ 4:32
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಮಾರ್ಕ 11:25
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಕೊಲೊ 3:13
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.ಲೂಕ 6:37
“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.ಲೂಕ 6:27
“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;ಲೂಕ 17:3–4
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.ಮತ್ತಾ 18:21–22
ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.ಮತ್ತಾ 18:15
“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.ರೋಮಾ 12:19
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.1 ಪೇತ್ರ 3:9
ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.ಮತ್ತಾ 5:44
ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು