ಮುಖಪುಟ › ಬೈಬಲ್ ಏನು ಹೇಳುತ್ತದೆ › ಸ್ನೇಹ
ಸಂಬಂಧಗಳು
ಸ್ನೇಹ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 18:24
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.ಜ್ಞಾನೋ 17:17
ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.ಜ್ಞಾನೋ 27:17
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.ಯೋಹಾ 15:13
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.ಜ್ಞಾನೋ 27:9
ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.1 ಕೊರಿ 15:33
ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”ಜ್ಞಾನೋ 16:28
ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.ಜ್ಞಾನೋ 27:6
ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.ಜ್ಞಾನೋ 22:24–25
ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.ಜ್ಞಾನೋ 13:20
ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.ಜ್ಞಾನೋ 12:26
ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.ಪ್ರಸ 4:9–10
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.ಜ್ಞಾನೋ 17:9
ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.ಯೋಬ 6:14
ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.1 ಪೇತ್ರ 4:8–10
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು