Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಉದಾರತೆ

ಜೀವನ ಮತ್ತು ಕೆಲಸ

ಉದಾರತೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 11 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಲೂಕ 6:38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
ಅ. ಕೃ 20:35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
2 ಕೊರಿ 9:7ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
ಜ್ಞಾನೋ 11:24–25ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ. ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
ಜ್ಞಾನೋ 19:17ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
2 ಕೊರಿ 9:6ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
1 ತಿಮೊ 6:17–19ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
ಇಬ್ರಿ 13:16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
1 ಯೋಹಾ 3:17ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
ಜ್ಞಾನೋ 22:9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
ಜ್ಞಾನೋ 3:27ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು