ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರ ನಂಬಿಗಸ್ತಿಕೆ
ನಂಬಿಕೆ
ದೇವರ ನಂಬಿಗಸ್ತಿಕೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ಯೋಹಾ 1:9
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.2 ತಿಮೊ 2:13
ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”ಇಬ್ರಿ 10:23
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.ಪ್ರಲಾ 3:22–23
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!ಧರ್ಮೋ 7:9
ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು2 ಥೆಸ 3:3
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.1 ಕೊರಿ 10:13
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.1 ಕೊರಿ 1:9
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.ಕೀರ್ತ 91:4
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.ಕೀರ್ತ 36:5
ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.1 ಪೇತ್ರ 4:19
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.1 ಥೆಸ 5:24
ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು