ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರ ಪ್ರೀತಿ
ನಂಬಿಕೆ
ದೇವರ ಪ್ರೀತಿ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯೋಹಾ 3:16
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.1 ಯೋಹಾ 4:8
ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.1 ಯೋಹಾ 4:16
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.ರೋಮಾ 5:8
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.1 ಯೋಹಾ 3:1
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.ಚೆಫ 3:17
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.1 ಯೋಹಾ 4:19
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.ರೋಮಾ 5:5
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.ರೋಮಾ 8:37–39
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.ಕೀರ್ತ 86:15
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.ಗಲಾ 2:20
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.ಎಫೆ 2:4–5
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.ಯೆರೆ 31:3
‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,ಯೋಹಾ 13:34
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು