ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರ ಸಾನ್ನಿಧ್ಯ
ನಂಬಿಕೆ
ದೇವರ ಸಾನ್ನಿಧ್ಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಕೀರ್ತ 16:11
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.ವಿಮೋ 33:14
ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.ಯೆರೆ 29:13
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.ಕೀರ್ತ 27:8
“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.ಚೆಫ 3:17
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.ಕೀರ್ತ 145:18
ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.ಇಬ್ರಿ 4:16
ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.ಇಬ್ರಿ 13:5
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.ಯಾಕೋ 4:8
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.ಮತ್ತಾ 1:23
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು