Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರ ವಾಗ್ದಾನಗಳು

ನಂಬಿಕೆ

ದೇವರ ವಾಗ್ದಾನಗಳು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

2 ಪೇತ್ರ 3:9ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
2 ಪೇತ್ರ 1:4ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
1 ಕೊರಿ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಫಿಲಿಪ್ಪಿ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
2 ಕೊರಿ 1:20ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
1 ಯೋಹಾ 1:9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಇಬ್ರಿ 10:23ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
ರೋಮಾ 6:23ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಇಬ್ರಿ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
ಧರ್ಮೋ 31:6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು