ಮುಖಪುಟ › ಬೈಬಲ್ ಏನು ಹೇಳುತ್ತದೆ › ಚಾಡಿ ಮಾತು
ಸಂಬಂಧಗಳು
ಚಾಡಿ ಮಾತು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 16:28
ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.ಜ್ಞಾನೋ 26:20
ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.ಜ್ಞಾನೋ 20:19
ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.1 ತಿಮೊ 5:13
ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.ಜ್ಞಾನೋ 11:13
ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.ಯಾಜ 19:16
“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.ಜ್ಞಾನೋ 18:8
ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.ಜ್ಞಾನೋ 10:18
ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.ವಿಮೋ 23:1
ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.ಯಾಕೋ 4:11
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.ಕೀರ್ತ 101:5
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.ಮತ್ತಾ 12:36
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು