Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಕೃತಜ್ಞತೆ

ಭಾವನೆಗಳು

ಕೃತಜ್ಞತೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಥೆಸ 5:18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಎಫೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
ಕೊಲೊ 3:15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ಕೀರ್ತ 107:1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ಕೀರ್ತ 106:1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ಯಾಕೋ 1:17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಕೀರ್ತ 100:4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
ಫಿಲಿಪ್ಪಿ 4:6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಕೊಲೊ 3:17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಕೊಲೊ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಕೀರ್ತ 118:24ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಕೀರ್ತ 136:1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
1 ಪೂರ್ವ 16:34ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
ಕೀರ್ತ 69:30ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ಕೀರ್ತ 28:7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು