ಮುಖಪುಟ › ಬೈಬಲ್ ಏನು ಹೇಳುತ್ತದೆ › ದುರಾಶೆ
ಜೀವನ ಮತ್ತು ಕೆಲಸ
ದುರಾಶೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಇಬ್ರಿ 13:5
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.1 ತಿಮೊ 6:10
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.ಮತ್ತಾ 6:24
“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.ಫಿಲಿಪ್ಪಿ 2:4
ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.ಲೂಕ 12:15
ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.ಜ್ಞಾನೋ 28:25
ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.1 ತಿಮೊ 6:9
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.ಪ್ರಸ 5:10
ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.ಜ್ಞಾನೋ 15:27
ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.ಜ್ಞಾನೋ 11:24
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು