Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಶೋಕ ಮತ್ತು ನಷ್ಟ

ಕಷ್ಟದ ಸಮಯಗಳು

ಶೋಕ ಮತ್ತು ನಷ್ಟ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಪ್ರಕ 21:4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
ಮತ್ತಾ 5:4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
ಕೀರ್ತ 34:18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಕೀರ್ತ 147:3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
1 ಥೆಸ 4:13ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
2 ಕೊರಿ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ಕೀರ್ತ 73:26ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.
ಯೋಹಾ 16:22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಕೀರ್ತ 116:15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
ಯೋಹಾ 11:25ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
ರೋಮಾ 8:18ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ಯೋಹಾ 11:35ಯೇಸು ಕಣ್ಣೀರಿಟ್ಟನು.
1 ಥೆಸ 4:14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು