Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಅಪರಾಧಭಾವ ಮತ್ತು ನಾಚಿಕೆ

ಭಾವನೆಗಳು

ಅಪರಾಧಭಾವ ಮತ್ತು ನಾಚಿಕೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಯೋಹಾ 1:9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ರೋಮಾ 8:1ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
ಯೆಶಾ 54:4“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
ರೋಮಾ 3:23ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ಯೆಶಾ 61:7ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
1 ಯೋಹಾ 2:1ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
ಕೀರ್ತ 34:4–5ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
ರೋಮಾ 10:11“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
ರೋಮಾ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
ಮೀಕ 7:19ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.
ಅ. ಕೃ 8:22ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
ಲೂಕ 15:7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು