ಮುಖಪುಟ › ಬೈಬಲ್ ಏನು ಹೇಳುತ್ತದೆ › ಆರೋಗ್ಯ
ಜೀವನ ಮತ್ತು ಕೆಲಸ
ಆರೋಗ್ಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ಕೊರಿ 6:19–20
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.3 ಯೋಹಾ 1:2
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.1 ಕೊರಿ 10:31
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.ಜ್ಞಾನೋ 17:22
ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.1 ತಿಮೊ 4:8
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.ವಿಮೋ 15:26
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.ಜ್ಞಾನೋ 3:7–8
ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.1 ಕೊರಿ 3:17
ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.ಜ್ಞಾನೋ 16:24
ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.ಆದಿ 1:29
ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆಜ್ಞಾನೋ 31:17
ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.ವಿಮೋ 23:25
ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.ಯೆರೆ 33:6
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.ಯಾಕೋ 5:15
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.ಯಾಕೋ 5:16
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು