ಮುಖಪುಟ › ಬೈಬಲ್ ಏನು ಹೇಳುತ್ತದೆ › ಪ್ರಾಮಾಣಿಕತೆ
ಸಂಬಂಧಗಳು
ಪ್ರಾಮಾಣಿಕತೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 12:22
ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.ಜ್ಞಾನೋ 12:19
ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.ಕೊಲೊ 3:9–10
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.ಜ್ಞಾನೋ 11:3
ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.ವಿಮೋ 20:16
“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.2 ಕೊರಿ 8:21
ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.ಜ್ಞಾನೋ 19:1
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.ಯೋಹಾ 8:32
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.ಜ್ಞಾನೋ 19:9
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.ಕೀರ್ತ 101:7
ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.ವಿಮೋ 23:1
ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.ಜ್ಞಾನೋ 24:28
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು